ETV Bharat / state

ಮತ್ತೊಮ್ಮೆ ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ - ದೇವರಿಗೆ ವಿಶೇಷ ಪೂಜೆ

ಸಿಎಂ ಬೊಮ್ಮಾಯಿ 1 ಇಲ್ಲವೇ 2 ರಂದು ಜಿಲ್ಲೆಗೆ ಬರಲಿದ್ದಾರೆಂದು ಸಚಿವ ಸೋಮಣ್ಣ ಕೂಡ ಮಾಹಿತಿ ನೀಡಿದ್ದಾರೆ. ಈಗಾಗಲೇ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವರು ಒಂದು ಸುತ್ತಿನ ಪೂರ್ವಭಾವಿ ಸಭೆಯನ್ನೂ ನಡೆಸಿದ್ದಾರೆ.

CM Bommai will come to Chamarajanagar again
ಮತ್ತೊಮ್ಮೆ ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಬೇಟಿ
author img

By

Published : Nov 15, 2022, 4:06 PM IST

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಾಗಿ ರೂಪುಗೊಂಡು 25 ವರ್ಷಗಳಾದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರಂತೆ. ಹೀಗಾಗಿ ಈಗ ಮತ್ತೊಮ್ಮೆ ಸಿಎಂ ಬೊಮ್ಮಾಯಿ ಡಿಸೆಂಬರ್ ಆರಂಭದಲ್ಲಿ ಅಂದರೆ 1 ಇಲ್ಲವೇ 2 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಜೊತೆಗೆ ಮಲೆಮಹದೇಶ್ವರ ಬೆಟ್ಟಕ್ಕೂ ತೆರಳಲಿದ್ದಾರೆ.

ಹಾಗೆ ಕೆರೆ ತುಂಬುವ ಯೋಜನೆ ಸೇರಿದಂತೆ ಹಲವಾರು ಘೋಷಣೆ ಮಾಡಲು ಸದ್ದಿಲ್ಲದೇ ತಯಾರಿ ನಡೆದಿದೆ.‌ ಮಲೆಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲೆಮಹದೇಶ್ವರರ ಪ್ರತಿಮೆ ಉದ್ಘಾಟಿಸಿ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವರು ಎಂದು ಕೆಲವು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಸಿಎಂ ಬೊಮ್ಮಾಯಿ 1 ಇಲ್ಲವೇ 2 ರಂದು ಜಿಲ್ಲೆಗೆ ಬರಲಿದ್ದಾರೆ ಎಂದು ಸಚಿವ ಸೋಮಣ್ಣ ಕೂಡ ಮಾಹಿತಿ ನೀಡಿದ್ದಾರೆ. ಈಗಾಗಲೇ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವರು ಒಂದು ಸುತ್ತಿನ ಪೂರ್ವಭಾವಿ ಸಭೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕಾರಿಣಿ: ಶಾಸಕ ಮಹೇಶ್ ಗೆಲುವಿನ ನಗೆ: ಸಚಿವ ಸೋಮಣ್ಣ ಟಾಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.