ಕೊಳ್ಳೇಗಾಲ (ಚಾಮರಾಜನಗರ): ನಗರದ ಗುಂಡಾಲ್ ಜಲಾಶಯ ರಸ್ತೆಯಲ್ಲಿ ಸಂಸದರು, ಶಾಸಕರು, ಜಿ.ಪಂ ಸದಸ್ಯ ಹಾಗೂ ತಾ.ಪಂ ಸದಸ್ಯರ ವಿರುದ್ಧ ಅವಹೇಳನಕಾರಿ ಫ್ಲೆಕ್ಸ್ ಅಳವಡಿಸಿದ್ದಾರೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದ್ದಾರೆ.
ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗ ಸೇರಿದ ಪ್ರತಿಭಟನಾಕಾರರು ಕಿಡಿಗೇಡಿಗಳ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಘಟನೆ ಕುರಿತು ಚಾಮರಾಜನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೈರಾಜ್ ಮಾತನಾಡಿ, ನಮ್ಮ ಜನಪ್ರತಿನಿಧಿಗಳ ವಿರುದ್ಧ ಈ ರೀತಿ ಅವಹೇಳನಕಾರಿ ಫ್ಲೆಕ್ಸ್ ಹಾಕಿರುವುದು ಖಂಡನೀಯ. ಜೆಡಿಎಸ್ ಮುಖಂಡ ಮಂಜೇಶ್ ಈ ಕೃತ್ಯ ಎಸಗಿರುವ ಶಂಕೆ ಇದ್ದು ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.