ETV Bharat / state

ಯಾರನ್ನೂ ಓಲೈಕೆ ಮಾಡುತ್ತಿಲ್ಲ, ಕಾಂಗ್ರೆಸ್​ಗೆ ಎಲ್ಲರೂ ಬೇಕು : ಸಚಿವ ವೆಂಕಟೇಶ್ - ಕಾಂಗ್ರೆಸ್

ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳು ಮುಸ್ಲಿಂರು, ಕ್ರೈಸ್ತರು, ಸಿಖ್ಖರು ಎಲ್ಲರೂ ಒಂದೇ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲರೂ ಬೇಕು. ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.

Minister Venkatesh spoke to the media.
ಸಚಿವ ವೆಂಕಟೇಶ್ ಮಾಧ್ಯಮದವರ ಜೊತೆ ಮಾತನಾಡಿದರು.
author img

By ETV Bharat Karnataka Team

Published : Jan 2, 2024, 4:03 PM IST

Updated : Jan 2, 2024, 10:39 PM IST

ಸಚಿವ ಕೆ ವೆಂಕಟೇಶ್ ಮಾಧ್ಯಮದವರ ಜೊತೆ ಮಾತನಾಡಿದರು.

ಚಾಮರಾಜನಗರ: ನಾವು ಯಾರನ್ನು ಓಲೈಕೆ ಮಾಡುತ್ತಿಲ್ಲ, ನಾವು ಕೂಡ ಹಿಂದೂಗಳೇ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.

ಹುಬ್ಬಳ್ಳಿ ಹಿಂದೂ ಕರಸೇವಕನ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ. ಜನರನ್ನು ಮೆಚ್ಚಿಸಲು ಏನೇನೋ ಮಾಡುತ್ತಿದ್ದಾರೆ. ಕಾಂಗ್ರೆಸ್​ ಎಲ್ಲ ಸಮುದಾಯದವರು ಇರುವಂತ ಪಕ್ಷ. ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳು ಮುಸ್ಲಿಂರು, ಕ್ರೈಸ್ತರು, ಸಿಖ್ಖರು ಎಲ್ಲರೂ ಒಂದೇ ಅಂತಾ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಎಲ್ಲರೂ ಬೇಕು. ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಅವರು ರಾಜಕಾರಣ ಮಾಡುತ್ತಿದ್ದಾರೆ. ರಾಮಮಂದಿರ ರಾಜಕಾರಣವಲ್ಲದೇ ಮತ್ತೇನು ಎಂದು ಸಚಿವರು ಪ್ರಶ್ನಿಸಿದರು.

ಹುಬ್ಬಳ್ಳಿ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣ ನಡೆದಿವೆಯಾ? ಈ ಮೊದಲು ಬಿಜೆಪಿ ಸರ್ಕಾರದಲ್ಲಿಯೂ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ ರಾಜ್ಯದಲ್ಲಿ ಅಪರಾಧ ಕೃತ್ಯ ತಡೆಗೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಮಾದಪ್ಪನ ದರ್ಶನ ಪಡೆದ ಸಚಿವ: ಹೊಸ ವರ್ಷದ ಹಿನ್ನೆಲೆ ಸೋಮವಾರ ಬೆಟ್ಟದಲ್ಲಿ ವಾಸ್ತವ್ಯ ಮಾಡಿ, ಮಲೆಮಹದೇಶ್ವರನಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ವಿಶೇಷ ಪೂಜೆ ಸಲ್ಲಿಸಿದರು. ಸಚಿವರು ಬೆಳಗ್ಗೆ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು. ನಂತರ ಸಂಜೆ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ತೆರಳಿದರು.

ರಾಮ ಜನ್ಮಭೂಮಿ ಗಲಾಟೆ, ಹಲವರನ್ನು ಬಂಧಿಸಿ ಕ್ರಮ: ಸಿಎಂ ಹುಬ್ಬಳ್ಳಿ ರಾಮ ಜನ್ಮಭೂಮಿ ಗಲಾಟೆ ವಿಷಯವಾಗಿ ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಇದರಲ್ಲಿ ಯಾವುದೇ ದ್ವೇಷ ರಾಜಕಾರಣವಿಲ್ಲ. ತಪ್ಪು ಮಾಡಿದವರನ್ನು ಏನು ಮಾಡಬೇಕು? ಅವರನ್ನು ಸುಮ್ನೆ ಬಿಟ್ಬಿಡಬೇಕಾ? ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಕಳೆದ 30 ವರ್ಷಗಳ ಹಿಂದಿನ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಪೊಲೀಸರು ಹಲವು ಪ್ರಕರಣಗಳಲ್ಲಿ ಭಾಗಿಯಾದವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ರಾಮಮಂದಿರ ಉದ್ಘಾಟನೆಗೆ ರಜೆ ಘೋಷಣೆಗೆ ಬಿಜೆಪಿ ಒತ್ತಾಯ ವಿಚಾರಕ್ಕೆ, ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವೇಕೆ ರಜೆ ನೀಡಬೇಕು ಎಂದು ಸಿಎಂ ಪ್ರಶ್ನಿಸಿದರು.

ಇದನ್ನೂಓದಿ:ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ - ವಿಜಯೇಂದ್ರ

Last Updated : Jan 2, 2024, 10:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.