ETV Bharat / state

ಪಟ್ಟಣ ಪ್ರವೇಶಿಸುವವರಿಗೆ ಮಾಸ್ಕ್​ ಕಡ್ಕಾಯ: ಗುಂಡ್ಲುಪೇಟೆ ತಹಶೀಲ್ದಾರ್ - ಕೋವಿಡ್​​-19

ಗುಂಡ್ಲುಪೇಟೆ ಪಟ್ಟಣದಲ್ಲಿ 4ನೇ ಹಂತದ ಲಾಕ್​ಡೌನ್​ ಸಡಿಲಗೊಳಿಸಿದ ಹಿನ್ನೆಲೆ ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಕೊರೊನಾ ಸೋಂಕಿನ ಕುರಿತು ಅರಿವು ಮೂಡಿಸಲಾಯಿತು.

corona-awareness-program-in-gundlupete
ಗುಂಡ್ಲುಪೇಟೆ ತಹಶೀಲ್ದಾರ್
author img

By

Published : May 22, 2020, 4:35 PM IST

ಗುಂಡ್ಲುಪೇಟೆ: 4ನೇ ಹಂತದ ಲಾಕ್​​ಡೌನ್ ಸಡಿಲಗೊಳಿಸಿದ ಹಿನ್ನೆಲೆ ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಕೊರೊನಾ ಸೋಂಕಿನ ಕುರಿತು ಅರಿವು ಮೂಡಿಸಲಾಯಿತು.

ಈ ವೇಳೆ ತಹಶೀಲ್ದಾರ್ ನಂಜುಂಡಯ್ಯ ಮಾತನಾಡಿ, ಚಾಮರಾಜನಗರ ಕೊರೊನಾ ಮುಕ್ತವಾಗಿದ್ದು, ಗ್ರೀನ್ ಝೋನ್ ಎಂಬ ಪಟ್ಟವನ್ನು ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅದರಂತೆ ತಾಲೂಕು ಆಡಳಿತದ ವತಿಯಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಪಟ್ಟಣ ಪ್ರವೇಶಿಸುವವರಿಗೆ ಮಾಸ್ಕ್​ ಕಡ್ಕಾಯ
ಪಟ್ಟಣ ಪ್ರವೇಶಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ರಮೇಶ್, ಪರಿಸರ ಅಧಿಕಾರಿ ಸಾಗರ್, ಸರ್ಕಲ್ ಇನ್ಸ್​​ಪೆಕ್ಟರ್ ಮಹದೇವಸ್ವಾಮಿ, ಸಬ್ ಇನ್ಸ್​​ಪೆಕ್ಟರ್ ಲತೇಶ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.