ಚಾಮರಾಜನಗರ: ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲೇ ವಾಸ್ತವ್ಯ ಹೂಡಬೇಕು. ತುರ್ತಾಗಿ ಸಂಪರ್ಕಕ್ಕೆ ಸಿಗಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸುತ್ತೋಲೆ ಹೊರಡಿಸಿದ್ದಾರೆ.
ಜಿಲ್ಲೆಯ ವಿವಿಧ ಇಲಾಖೆಯ ಮುಖ್ಯಸ್ಥರು, ಅಧೀನ ಅಧಿಕಾರಿಗಳಲ್ಲಿ ಬಹುಪಾಲು ಮಂದಿ ಮೈಸೂರಿನಲ್ಲಿ ವಾಸಿಸುತ್ತಿರುವ ಹಿನ್ನೆಲೆ ಕೊರೊನಾ ತಡೆಗೆ ತುರ್ತು ಕ್ರಮ ಅನುಷ್ಠಾನಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಹೂಡಬೇಕು. ತಮ್ಮ ಅನುಮತಿ ಪಡೆಯದೇ ಸಿಬ್ಬಂದಿಗೆ ರಜೆ ಕೊಡಬಾರದು ಎಂದು ಸೂಚಿಸಿದ್ದಾರೆ. ಆದೇಶ ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಸಿದ್ದಾರೆ.
ಬುಧವಾರ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲೂ ಇದು ಚರ್ಚೆಯಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಉಳಿಯುವಂತೆ ಸಚಿವರೂ ಸೂಚಿಸಿದ್ದರು.