ಚಾಮರಾಜನಗರ: ಕೊರೊನಾ ಎರಡನೇ ಅಲೆಯ ಅಬ್ಬರ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಬರೋಬ್ಬರಿ 386 ಮಂದಿಗೆ ಸೋಂಕು ದೃಢಪಟ್ಟಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 2456ಕ್ಕೆ ಏರಿಕೆಯಾಗಿದೆ.
242 ಮಂದಿ ಗುಣಮುಖರಾಗಿದ್ದಾರೆ. 48 ಮಂದಿ ಐಸಿಯುನಲ್ಲಿದ್ದು 1697 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 4632 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು 4 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.