ಚಾಮರಾಜನಗರ: ದೆಹಲಿಯ ಧರ್ಮಸಭೆಯಲ್ಲಿ ಭಾಗಿಯಾಗಿದ್ದ ತಬ್ಲಿಘಿ ಜಮಾತ್ನ 97 ಜನರ ಪೈಕಿ ನೆಗೆಟಿವ್ ವರದಿ ಬಂದಿರುವ 83 ಜನರನ್ನು ಕ್ವಾರಂಟೈನ್ ಕೇಂದ್ರದಿಂದ ಇಂದು ಮನೆಗೆ ಕಳುಹಿಸಿದ್ದು ಇದುವರೆವಿಗೂ ಚಾಮರಾಜನಗರ ಕೊರೊನಾ ಮುಕ್ತವಾಗಿದೆ.
ಇಂದು ಇಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದ್ದು, ತಬ್ಲಿಘಿ ಇನ್ಮು 14 ಮಂದಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕ್ವಾರಂಟೈನ್ ಕೇಂದ್ರದಲ್ಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.
ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ವ್ಯಕ್ತಿಗಳು 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದು, ವಿದೇಶಗಳಿಂದ ಜಿಲ್ಲೆಗೆ ಬಂದಿದ್ದ ಒಟ್ಟು 43 ಮಂದಿಯು 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿ ಸುರಕ್ಷಿತವಾಗಿದ್ದಾರೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.