ETV Bharat / state

ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​

author img

By

Published : Apr 8, 2021, 12:02 PM IST

ಚಾಮರಾಜನಗರ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.

Corona Positive for 14  students
14 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯದ ವಿವಿಧ ಭಾಗಗಳಿಂದ ಬಿಎಸ್ಸಿ ಕೃಷಿ ಅಧ್ಯಯನಕ್ಕೆ ಬಂದಿದ್ದ 60 ಮಂದಿ ವಿದ್ಯಾರ್ಥಿಗಳಲ್ಲಿ 14 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇನ್ನೂ 40 ವಿದ್ಯಾರ್ಥಿಗಳ ವರದಿ ಬರಬೇಕಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸೋಂಕಿತ ಸಿಬ್ಬಂದಿವೋರ್ವರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. 12 ಮಂದಿ ಅಧ್ಯಾಪಕರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಗ್ಯ ಇಲಾಖೆಯ ಅನುಮತಿಯೊಂದಿಗೆ ಕಾಲೇಜನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಬುಧವಾರದಿಂದಲೇ ಕಾಲೇಜಿಗೆ ರಜೆ ಘೋಷಿಸಿದ್ದು, ಆನ್​ಲೈನ್ ಪಾಠ ನಡೆಯುತ್ತಿದೆ. ವಿದ್ಯಾರ್ಥಿಗಳ ಪಾಲಕರಿಗೆ ಕರೆಮಾಡಿ ಧೈರ್ಯ ತುಂಬಲಾಗಿದ್ದು, ಆತಂಕ ಪಡುವ ಅಗತ್ಯವಿಲ್ಲವೆಂದು ಕಾಲೇಜಿನ ವಿಶೇಷ ಅಧಿಕಾರಿ ರಾಜಣ್ಣ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ್ದಾರೆ.

ಓದಿ: ದೇಶದಲ್ಲಿ ಮತ್ತೆ ಕೋವಿಡ್‌ ದಾಖಲೆ: ಲಕ್ಷ ದಾಟಿದ ಸೋಂಕಿತರು; 9 ಕೋಟಿ ಜನರಿಗೆ ಲಸಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.