ETV Bharat / state

ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ: ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್ - corona patient suicide

ಚಾಮರಾಜನಗರದ ಕಾಮಗೆರೆ ಗ್ರಾಮ ನಿವಾಸಿ ಕೃಷ್ಣ ಎಂಬುವವರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಮೃತದೇಹ ನೀಡುವಂತೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

Corona positive patient death chamrajnagar
ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್
author img

By

Published : Aug 27, 2020, 10:36 PM IST

ಚಾಮರಾಜನಗರ: ಆತ್ಮಹತ್ಯೆ ಮಾಡಿಕೊಂಡ‌ ವ್ಯಕ್ತಿಗೆ ಕೊರೊನಾ‌ ದೃಢಪಟ್ಟ ಘಟನೆ ಹನೂರಿನಲ್ಲಿ ನಡೆದಿದ್ದು, ಮೃತದೇಹ ನೀಡಿದ ಕಾರಣ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್

ಹಲವು ತಿಂಗಳಿನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾಮಗೆರೆ ಗ್ರಾಮದ ನಿವಾಸಿ ಕೃಷ್ಣ (48) ಎಂಬುವವರು ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ನೀಡಿದ, ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಯಿತು.

ಮರಣೋತ್ತರ ಪರೀಕ್ಷೆಗೆ ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿತ್ತು. ಈ ವೇಳೆ ಮೃತ ಕೃಷ್ಣ ಎಂಬಾತನಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೃತದೇಹ ನೀಡಲು ವೈದ್ಯರು ನಿರಾಕರಿಸಿದ್ದಾರೆ.

ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆ ಮುಂಭಾಗ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸದ್ಯ, ಆಸ್ಪತ್ರೆಯ ಶವಗಾರದಲ್ಲಿ ಮೃತ ದೇಹ ಇರಿಸಲಾಗಿದೆ. ಹಿರಿಯ ಅಧಿಕಾರಿಗಳ‌ ಆದೇಶ ಅನ್ವಯ ಮುಂದುವರೆಯುವುದಾಗಿ ಪೊಲೀಸರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.