ಚಾಮರಾಜನಗರ: ಜಿಲ್ಲೆಯಲ್ಲಿಂದು 44 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 2879ಕ್ಕೆ ಏರಿಕೆಯಾಗಿದೆ. ಜೊತೆಗೆ ಮಹಾಮಾರಿಗೆ ಇಂದು ಒಬ್ಬರು ಬಲಿಯಾಗಿದ್ದಾರೆ.
ಇನ್ನೂ ಇಂದು 17 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 551 ಸಕ್ರೀಯ ಪ್ರಕರಣಗಳಿದ್ದು, 162 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 741 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಕೊಳ್ಳೇಗಾಲದ 79 ವರ್ಷ ವಯಸ್ಸಿನ ವ್ಯಕ್ತಿಗೆ ಕಳೆದ 9 ರಂದು ಕೊರೊನಾ ಸೋಂಕು ಧೃಢವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಇನ್ನೂ ಇಂದು ಗುಣಮುಖರಾದವರಲ್ಲಿ 60 ವರ್ಷ ಮೇಲ್ಪಟ್ಟವರು 7 ಮಂದಿ ಇದ್ದಾರೆ.