ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ತ್ರೀರೋಗ ತಜ್ಞರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಈಟಿವಿ ಭಾರತಕ್ಕೆ ಉನ್ನತ ಮೂಲಗಳು ತಿಳಿಸಿವೆ.
ಕೆಲ ದಿನ ಹೊರ ರೋಗಿಗಳ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಜ್ವರ ಬಂದಿದ್ದರಿಂದ ರಜೆ ಹಾಕಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಬಳಿ ಚಿಕಿತ್ಸೆ ಪಡೆದಿದ್ದ ಗರ್ಭಿಣಿಯರು, ಇತರೆ ರೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಡ್ರಗ್ ಕಂಟ್ರೋಲರ್ ಒಬ್ಬರಿಗೂ ಕೊರೊನಾ ಬಂದಿದೆ ಎನ್ನಲಾಗಿದೆ.