ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಳೆಗಾಗಿ ಪ್ರಾರ್ಥಿಸಿ ಗೋ ಪೂಜೆ ನಡೆಸಲಾಯಿತು.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದ್ದರೂ ಕೊಳ್ಳೇಗಾಲ, ಹನೂರು ಭಾಗದಲ್ಲಿ ಮಳೆಯಾಗದ ಹಿನ್ನೆಲೆ ಗೋ ಮಾತೆಗೆ ಪೂಜೆ ಸಲ್ಲಿಸಿ ವರುಣನ ಕೃಪೆಗಾಗಿ ಪ್ರಾರ್ಥಿಸಲಾಯಿತು. ಮಾದಪ್ಪನ ದೇವಾಲಯದ ಮುಂಭಾಗದಲ್ಲಿ ಅರ್ಚಕರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಮಡಿಯಾಗಿ ಗೋ ಮಾತೆಗೆ ಹೂವಿನ ಹಾರ ಹಾಕಿ ಪಾದ ಪೂಜೆ ಸಲ್ಲಿಸಿದರು.
ಮಳೆ ಕೈಕೊಟ್ಟ ವೇಳೆ ಮಾದಪ್ಪನ ಬೆಟ್ಟದಲ್ಲಿ ಗೋ ಪೂಜೆ ಸಲ್ಲಿಸಿದರೆ ಮಳೆಯಾಗುತ್ತದೆ ಎಂಬ ಪ್ರತೀತಿ ಇದ್ದು, ಮಳೆಗಾಗಿ ಪ್ರಾರ್ಥಿಸಿ ಗೋ ಪೂಜೆ ನಡೆಸಲಾಗಿದೆ.