ETV Bharat / state

ಚಾಮರಾಜನಗರದಲ್ಲಿ ಪ್ರತ್ಯೇಕ ಪ್ರಕರಣ: ವನ್ಯಜೀವಿ ಬೇಟೆಯಾಡಿದ ಓರ್ವನ ಬಂಧನ, ಮೂವರು ಪರಾರಿ

ಚಾಮರಾಜನಗರದಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಕಡವೆ ಹಾಗು ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ.

ಕಡವೆ ಮಾಂಸ ಆರೋಪಿಯೊಂದಿಗೆ ಅರಣ್ಯ ಅಧಿಕಾರಿಗಳು
ಕಡವೆ ಮಾಂಸ ಆರೋಪಿಯೊಂದಿಗೆ ಅರಣ್ಯ ಅಧಿಕಾರಿಗಳು
author img

By

Published : Jun 17, 2023, 2:53 PM IST

ಚಾಮರಾಜನಗರ: ವನ್ಯಜೀವಿ ಬೇಟೆ ಪ್ರತ್ಯೇಕ ಪ್ರಕರಣದಲ್ಲಿ ಜಿಂಕೆ ಹಾಗೂ ಕಡವೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕಡವೆ ಬೇಟೆಯಾಡಿದ್ದ ಮಾರ್ಟಳ್ಳಿ ಸಮೀಪದ ಸಂದನಪಾಳ್ಯ ಗ್ರಾಮದ ಕೊಳಂದೈರಾಜ್ ಎಂಬುವವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ರಾಮಾಪುರ ವನ್ಯಜೀವಿ ವಲಯದಲ್ಲಿ ಕಡವೆ ಬೇಟೆಯಾಡಿ ಅದರ ಮಾಂಸವನ್ನು ಪಾಲು ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳನ್ನು ಕಂಡು ಸ್ಥಳದಲ್ಲಿದ್ದ ಜಾನ್ ಮತ್ತು ಕುಮಾರ್ ಎಂಬುವವರು ಪರಾರಿಯಾಗಿದ್ದು, ಕೊಳಂದೈರಾಜ್ ಸಿಕ್ಕಿಬಿದ್ದಿದ್ದಾನೆ.

ಕೂಡಲೇ ಆರೋಪಿ ಕೊಳಂದೈರಾಜ್, ಕಡವೆ ಮಾಂಸ ಹಾಗೂ ಅದನ್ನು ಬೇಟೆಯಾಡಲು ಬಳಸಿದ್ದ ಕೊಡಲಿ, ಮಚ್ಚು ಮುಂತಾದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಅರಣ್ಯಾಧಿಕಾರಿಗಳು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಜಿಂಕೆ ಮಾಂಸ: ಮತ್ತೊಂದು ಪ್ರಕರಣದಲ್ಲಿ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ತಂತಿಯಲ್ಲಿ ನೇತು ಹಾಕಿದ್ದ 3 ಕೆಜಿಯಷ್ಟು ಜಿಂಕೆ ಮಾಂಸವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಂಪಯ್ಯಹಟ್ಟಿ ಗ್ರಾಮದವರಾದ ಸೋಮಣ್ಣ ಹಾಗೂ ನರಸಿಂಹ ಎಂಬುವವರು ತಲೆಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಇವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿ ಸಾವು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ‌ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನತ್ತ ಗ್ರಾಮದಲ್ಲಿ ನಡೆದಿದೆ. ನಾಗನತ್ತ ಗ್ರಾಮದ ಪರಮೇಶ್ ಮೃತಪಟ್ಟ ವ್ಯಕ್ತಿ.‌ ನಾಗನತ್ತ ಗ್ರಾಮದ ತೋಟದ ಮನೆಯ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ, ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಹನೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೂ ಮುನ್ನ ಇದೇ ಜಿಲ್ಲೆಯಲ್ಲಿ ಶ್ರೀಗಂಧ ಸಾಗಣೆ, ಜಿಂಕೆ ಬುರುಡೆ ಮಾರಾಟ ಹಾಗೂ ಜಿಂಕೆ ಮಾಂಸ ಸಾಗಿಸುತ್ತಿದ್ದ ಪ್ರಕರಣಗಳನ್ನು ಚಾಮರಾಜನಗರದ ಕೊಳ್ಳೇಗಾಲದಲ್ಲಿ ಇದೇ ತಿಂಗಳ ಪ್ರಾರಂಭದಲ್ಲಿ ಪೊಲೀಸರು ಪತ್ತೆಹಚ್ಚಿದ್ದರು. ಜಿಂಕೆ ಬುರುಡೆ ಸಮೇತ ಕೊಂಬುಗಳನ್ನು ಮಾರಾಟ ಮಾಡಲು ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿತ್ತು.

ಇನ್ನು ಶ್ರೀಗಂಧ ಮರದ ತುಂಡುಗಳನ್ನು ಸಾಗಣೆ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಗ್ರಾಮದ ಬ್ರಿಡ್ಜ್ ಬಳಿ ನಡೆದಿತ್ತು. ಪ್ರಕರಣದ ಆರೋಪಿ ಮೈಸೂರು ಮೂಲದ ಜಾಫರ್ ಷರೀಪ್. ಅಕ್ರಮ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾರುತಿ ಓಮಿನಿ ಕಾರಿನಲ್ಲಿ ಶ್ರೀಗಂಧ ಸಾಗಾಟ ಮಾಡುತ್ತಿದ್ದಾಗ ಕೊಳ್ಳೇಗಾಲ ಬಫರ್ ವಲಯ ಹಾಗೂ ಕೊಳ್ಳೇಗಾಲ ವೈಲ್ಡ್ ಲೈಫ್​​ನ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣ ಪತ್ತೆ ಹಚ್ಚಿದ್ದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ವ್ಯಕ್ತಿ ಆತ್ಮಹತ್ಯೆ: ಪೊಲೀಸರ ಹಲ್ಲೆಯೇ ಸಾವಿಗೆ ಕಾರಣ ಎಂದು ಆರೋಪ.. ದೂರು ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.