ಚಾಮರಾಜನಗರ: ಅಯೋಧ್ಯೆಯಲ್ಲಿ ಬುಧವಾರ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
![curfew in chamarjanagar](https://etvbharatimages.akamaized.net/etvbharat/prod-images/kn-cnr-01-nishedha-av-7202614_04082020104248_0408f_1596517968_43.jpg)
ರಾಮಮಂದಿರದ ಪರವಾಗಿ ಸಿಹಿ ವಿತರಣೆ, ವಿರೋಧವಾಗಿ ಪ್ರತಿಭಟನೆ, ಬೈಕ್ ರ‍್ಯಾಲಿ ನಡೆಸದಂತೆ ಆ. 5ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಚಾಮರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಹೊರಡಿಸಿ ಡಿಸಿ ಆದೇಶಿಸಿದ್ದಾರೆ.
ಭೂಮಿಪೂಜೆ ಸಂಬಂಧ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದೆಂಬ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮನವಿ ಮಾಡಿದ್ದರು.