ಚಾಮರಾಜನಗರ: ಅರೆಬೆತ್ತಲೆಯಾಗಿ ವ್ಯಕ್ತಿಯೊಬ್ಬನ ಶವ ಚಾಮರಾಜನಗರ ತಾಲೂಕಿನ ಕೋಡಿಮೋಳೆ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಮೃತನಿಗೆ ಅಂದಾಜು 35-39 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಾಕು ಇಲ್ಲವೇ ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಕೊಲೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ : ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ