ಕೊಳ್ಳೇಗಾಲ: ಅನಾರೋಗ್ಯದಿಂದ ಬೇಸತ್ತು ಕ್ರಿಮಿನಾಶಕ ಕುಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ದೊಡ್ಡನಾಯಕರ ಬೀದಿ ನಿವಾಸಿ ರಮೇಶ (36) ಎಂಬ ಯುವಕ ಮೃತ ದುರ್ದೈವಿಯಾಗಿದ್ದು, ಕಳೆದ ಹಲವಾರು ತಿಂಗಳುಗಳಿಂದ ಹೊಟ್ಟೆನೋವಿನಿಂದ ನರಳುತ್ತಿದ್ದನು. ಹೊಟ್ಟೆನೋವು ತಾಳಲಾರದೇ ಸೋಮವಾರ ರಾತ್ರಿ ಮನೆಯಲ್ಲಿ ಜಮೀನಿಗೆ ಹಾಕುವ ಕೀಟನಾಶಕ ಸೇವಿಸಿದ್ದಾನೆ. ಈತನ ನರಳಾಟ ಗಮನಿಸಿದ ಮನೆಯವರು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಸರ್ಕಾರಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅವರ ವಾರಸುದಾರರಿಗೆ ಒಪ್ಪಿಸಲಾಗಿದೆ.