ಚಾಮರಾಜನಗರ: ದೇಶದ ಅರ್ಥ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರ ಕೂಗಿದ್ರು.
ಇನ್ನಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು, ಇಲ್ಲದಿದ್ದಲ್ಲಿ ದೇಶಾದ್ಯಂತ ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.