ಚಾಮರಾಜನಗರ: ಬಂದೂಕು ಬಳಸಿ ಎರಡು ಜಿಂಕೆಗಳನ್ನು ಬೇಟೆಯಾಡಿದ್ದ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಜಿಲ್ಲೆಯ ಬಿಆರ್ಟಿ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯದ ಸೂರಪುರ ಗಸ್ತಿನ ಸೂರಾಪುರ-ಹಿತ್ತಲದೊಡ್ಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಬಸವ, ನವೀನ್ ಬಂಧಿತ ಆರೋಪಿಗಳು. ಇವರು ನಾಡಬಂದೂಕಿನಿಂದ ಗುಂಡು ಹಾರಿಸಿ ಎರಡು ಜಿಂಕೆಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದರು.
ಖಚಿತ ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ದಾಳಿ ನಡೆಸಿ ಎರಡು ಜಿಂಕೆಗಳ ಮೃತದೇಹ, ಮದ್ದಿನ ಪುಡಿ, ಮಚ್ಚು ಹಾಗೂ ಮೂರು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಪರಾರಿಯಾಗಿರುವ 8 ಮಂದಿ ಬೇಟೆಗಾರರ ಪತ್ತೆಗೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ.