ಚಾಮರಾಜನಗರ: ಜಿಲ್ಲಾ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಸಿಜನ್ ದುರಂತದಿಂದ ಮೃತಪಟ್ಟ ಕುಟುಂಬಕ್ಕೆ 1 ಲಕ್ಷ ರೂ. ನೆರವು ನೀಡಿದರು. ಮೊದಲಿಗೆ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ದುರಂತದಲ್ಲಿ ಮೃತಪಟ್ಟ ಸ್ವಾಮಿ ಎಂಬುವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧನಸಹಾಯ ಮಾಡಿದರು.
ಜಿಲ್ಲೆಯಾದ್ಯಂತ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಮನೆಗಳಿಗೆ ಡಿಕೆಶಿ ಭೇಟಿ ನೀಡಲಿದ್ದು, ಹನೂರಿನಲ್ಲಿ ಕಾಂಗ್ರೆಸ್‌ನ ಸಾಂತ್ವಾನ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ರಾತ್ರಿ 9 ರ ತನಕವೂ ಜಿಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಶಾಸಕರಾದ ನರೇಂದ್ರ, ಪುಟ್ಟರಂಗಶೆಟ್ಟಿ ಸಾಥ್ ನೀಡಲಿದ್ದಾರೆ.
ಮತ್ತೊಂದೆಡೆ ಕೊಳ್ಳೇಗಾಲದ ಸತ್ತೇಗಾಲ ಹ್ಯಾಂಡ್ ಪೋಸ್ಟ್ನಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.