ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ಡೀನ್ ಡಾ ಸಂಜೀವ್ ಕುಮಾರ್ ಹಾಗೂ ನೇತ್ರತಜ್ಞ ಡಾ ಮಹೇಶ್ವರ್ ಸಿಮ್ಸ್ ಆವರಣದಲ್ಲಿ ಬೈದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಡಾ. ಮಹೇಶ್ವರ್ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಡಾ. ಜಿ. ಎಂ ಸಂಜೀವ್ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಯಡಬೆಟ್ಟದಲ್ಲಿರುವ ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.