ETV Bharat / state

ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ: ಸಿಹಿ ಸುದ್ದಿ ಹಂಚಿಕೊಂಡ ಸಚಿವ ಸುರೇಶ್ ಕುಮಾರ್

ಚಾಮರಾಜನಗರ ನಗರದ ಬಿ.ರಾಚಯ್ಯ ಜೋಡಿ ರಸ್ತೆಗೆ ನಗರಸಭೆ ವತಿಯಿಂದ ₹10 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಿ ಕತ್ತಲು ಮುಕ್ತ ರಸ್ತೆಯನ್ನಾಗಿ ಮಾಡಲಾಗಿದ್ದು, ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್​ ಸಂತಸ ಹಂಚಿಕೊಂಡಿದ್ದಾರೆ.

Drive to Simple Dussera in Chamarajanagar
ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ
author img

By

Published : Oct 17, 2020, 1:40 PM IST

ಚಾಮರಾಜನಗರ: ನಗರದ ಚಾಮರಾಜೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಸಿ‌.ಪುಟ್ಟರಂಗಶೆಟ್ಟಿ ಜಿಲ್ಲಾ ದಸರಾಗೆ ಚಾಲನೆ ನೀಡಿದರು‌.

ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ
ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ದೇವಾಲಯ ಒಳಾವರಣದಲ್ಲಿ 3 ದಿನ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡಲಾಗುತ್ತದೆ‌.

ಜಿಲ್ಲಾ ದಸರಾ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್​, ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಇಂದಿನ ಜಿಲ್ಲಾ ದಸರಾದಲ್ಲಿ ಭಾಗಿಯಾಗಲಿಲ್ಲ. ಆದರೆ ಈ ಹಬ್ಬದ ಸಮಯದಲ್ಲಿ ಜಿಲ್ಲೆಯ ಜನತೆಗೆ ಕೆಲ ಸಿಹಿ ಸುದ್ದಿಗಳನ್ನು ಹೇಳಬೇಕಿದೆ. ನಗರದ ಬಿ.ರಾಚಯ್ಯ ಜೋಡಿ ರಸ್ತೆಗೆ ನಗರಸಭೆ ವತಿಯಿಂದ ₹10 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಿ ಕತ್ತಲು ಮುಕ್ತ ರಸ್ತೆಯನ್ನಾಗಿ ಮಾಡಲಾಗಿದ್ದು, ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ.

Drive to Simple Dussera in Chamarajanagar
ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ: ಸಿಹಿ ಸುದ್ದಿ ಹಂಚಿಕೊಂಡ ಸಚಿವ ಸುರೇಶ್ ಕುಮಾರ್

ಹಾಗೆಯೇ ಎನ್​ಹೆಚ್​-209 ರಸ್ತೆಯು ನಗರಸಭೆ ವ್ಯಾಪ್ತಿಯಲ್ಲಿ 6 ಕಿ.ಮೀ. ಹಾದು ಹೋಗಿದ್ದು, ಗಾಳಿಪುರ ಮುಖ್ಯ ರಸ್ತೆ, ಸ್ಟೇಡಿಯಂ ರಸ್ತೆ, ಕುಲುಮೆ ರಸ್ತೆ ಹಾಗೂ 13 ಮತ್ತು 14ನೇ ವಾರ್ಡಿನ ಮುಖ್ಯ ರಸ್ತೆಗಳಲ್ಲಿ ವಿದ್ಯುತ್​ ದೀಪ ಅಳವಡಿಸುವ ಬಗ್ಗೆ ನಗರಸಭೆ ವತಿಯಿಂದ ಅಂದಾಜು ₹ 112 ಲಕ್ಷಗಳಿಗೆ ಟೆಂಡರ್ ಕರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳಿಗೆ ಎಲ್ಇಡಿ ದೀಪ ಅಳವಡಿಸಿ ಚಾಮರಾಜನಗರವನ್ನು ಸುಂದರ ನಗರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.