ಚಾಮರಾಜನಗರ: ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಕುಡಿದಿರುವುದಾಗಿ ಪತಿರಾಯನೋರ್ವ ERSS-112 ನಂಬರ್ಗೆ ಕರೆ ಮಾಡಿ ಅಳಲು ತೋಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದ್ದು, ಆತನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
![Drunk Man Calls Up police](https://etvbharatimages.akamaized.net/etvbharat/prod-images/kn-cnr-06-police-av-ka10038_01092021214907_0109f_1630513147_296.jpg)
ಕೊಳ್ಳೇಗಾಲ ತಾಲೂಕಿನ ಆಲಹಳ್ಳಿ ಗ್ರಾಮದ ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿದ್ದ ಸಂದರ್ಭದಲ್ಲಿ ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದು, ಮಧ್ಯರಾತ್ರಿಯಲ್ಲಿ ತಾನು ಸಾಂಸಾರಿಕ ವಿಚಾರದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿರುವುದಾಗಿ ಕರೆ ಮಾಡಿದ್ದಾನೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ವಾಹನದ ಪೊಲೀಸರು ವ್ಯಕ್ತಿಯನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇದನ್ನೂ ಓದಿರಿ: ಆಕ್ಸಿಡೆಂಟ್ ಆದ ವ್ಯಕ್ತಿಯನ್ನ ತಮ್ಮದೇ ಕಾರ್ನಲ್ಲಿ ಆಸ್ಪತ್ರೆಗೆ ಸಾಗಿಸಿದ ಹೆಡ್ಕಾನ್ಸ್ಟೇಬಲ್!
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪಿಎಸ್ಐ ಅಶೋಕ್ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿ, ಆತ್ಮಹತ್ಯೆಗೆ ಯತ್ನಿಸಿ ಆತ ವಿಷ ಕುಡಿದಿಲ್ಲ, ಮತ್ತಿನಲ್ಲಿ ಕುಡಿದೆ ಎಂದು ಹೇಳಿದ್ದಾನೆ. ಈಗಾಗಲೇ ಆತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಇನ್ನು, ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ವ್ಯಕ್ತಿಯನ್ನು ರಕ್ಷಣೆ ಮಾಡಿರುವ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.