ETV Bharat / state

ಆರೋಗ್ಯ ಸಚಿವ, ಅಧಿಕಾರಿಗಳ ವಿರುದ್ಧ ಕೊಲೆ ಕೇಸ್ ದಾಖಲಿಸಲು ಧ್ರುವ ನಾರಾಯಣ ಆಗ್ರಹ - Chamarajanagar News

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಸುಳ್ಳು ಮಾಹಿತಿ ನೀಡಿದ್ದು‌ ಕೂಡಲೇ ಅವರು ರಾಜೀನಾಮೆ ಕೊಡಬೇಕು. ನ್ಯಾಯಮೂರ್ತಿಗಳ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ 304 ಕೇಸ್(ಕೊಲೆ ಪ್ರಕರಣ) ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆಗ್ರಹಿಸಿದರು.

chamarajanagar
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ
author img

By

Published : May 13, 2021, 2:12 PM IST

ಚಾಮರಾಜನಗರ: ಚಾಮರಾಜನಗರ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ 304 ಕೇಸ್(ಕೊಲೆ ಪ್ರಕರಣ) ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಸುಳ್ಳು ಮಾಹಿತಿ ನೀಡಿದ್ದು‌ ಕೂಡಲೇ ಅವರು ರಾಜೀನಾಮೆ ಕೊಡಬೇಕು. ಇಲ್ಲದಿದ್ದಲ್ಲಿ‌ ಮುಖ್ಯಮಂತ್ರಿ ಯಡಿಯೂರಪ್ಪ ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ

ಈ ದುರಂತಕ್ಕೆ ಕಾರಣರಾದ ಜನಪ್ರತಿನಿಧಿಗಳು ಹಾಗೂ‌ ಅಧಿಕಾರಿಗಳ ವಿರುದ್ಧ 304 ಕೇಸು ದಾಖಲಾಗಬೇಕು.‌ ಜಿಲ್ಲಾಡಳಿತ ವಿಫಲವೆಂಬುದು ನ್ಯಾಯಮೂರ್ತಿಗಳ ವರದಿಯಲ್ಲಿ ಬಹಿರಂಗವಾಗಿದೆ.‌ಈ ದುರಂತದಲ್ಲಿ ಸಾವೀಗಿಡಾಗಿರುವ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು‌ ಒತ್ತಾಯಿಸಿದರು.

ಆ ದಿನ ನಡೆದ ಎಲ್ಲಾ ಸನ್ನಿವೇಶಗಳ ಬಗ್ಗೆ ನ್ಯಾಯಮೂರ್ತಿಗಳು ಸಂಕ್ಷಿಪ್ತವಾಗಿ ಒಳ್ಳೆಯ ವರದಿ ಸಲ್ಲಿಸಿದ್ದಾರೆ. ಈ ಸರ್ಕಾರ ಸಂಪೂರ್ಣವಾಗಿ ಆಡಳಿತದಲ್ಲಿ ವಿಫಲವಾಗಿದೆ. ಇದಕ್ಕೆ ಕಾರಣರಾದ ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಿರುದ್ಧ ಶೀಘ್ರವೇ ಕ್ರಮವೇ ತೆಗೆದುಕೊಳ್ಳಬೇಕೆಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.