ETV Bharat / state

ಶಾರ್ಟ್ ಸರ್ಕ್ಯೂಟ್‌ನಿಂದ ಶೆಡ್ಡಿಗೆ ಬೆಂಕಿ; ಮಲಗಿದ್ದ ವೃದ್ಧೆ ಸಜೀವ ದಹನ - chamarajanagra police station

ಶಾರ್ಟ್ ಸರ್ಕ್ಯೂಟ್‌ನಿಂದ ಶೆಡ್ಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮಲಗಿದ್ದ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದಲ್ಲಿ ನಡೆದಿದೆ.

due-to-short-cercuit-old-women-died-in-fire-accident
ಶಾರ್ಟ್ ಸರ್ಕ್ಯೂಟ್ ನಿಂದ ಶೆಡ್ಡಿಗೆ ಬೆಂಕಿ; ಮಲಗಿದ್ದ ವೃದ್ಧೆ ಸಜೀವ ದಹನ
author img

By

Published : Feb 11, 2022, 11:34 AM IST

ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್​​ ಕಾರಣದಿಂದಾಗಿ ಶೆಡ್ಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮಲಗಿದ್ದ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದಲ್ಲಿ ನಡೆದಿದೆ. ಬದನಗುಪ್ಪೆ ಗ್ರಾಮದ ಲಕ್ಷ್ಮಮ್ಮ(75) ಮೃತ ದುರ್ದೈವಿಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಈ ಶೆಡ್ಡಿನಲ್ಲಿ ಲಕ್ಷ್ಮಮ್ಮ ಏಕಾಂಗಿಯಾಗಿ ವಾಸಿಸುತ್ತಿದ್ದರು. ಗುರುವಾರ ತಡರಾತ್ರಿ ಉಂಟಾದ ಶಾರ್ಟ್ ಸರ್ಕೂಟ್ ನಿಂದ ಶೆಡ್ಡಿಗೆ ಬೆಂಕಿ ಹೊತ್ತಿಕೊಂಡಿದೆ.

ಇದೇ ವೇಳೆ ಅಲ್ಲಿಯೇ ಮಲಗಿದ್ದ ಲಕ್ಷ್ಮಮ್ಮ ಅವರಿಗೆ ಏಳಲಾಗದೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅಸುನೀಗಿರಬಹುದೆಂದು ತಿಳಿದುಬಂದಿದೆ. ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೊಡಗು: ನ್ಯಾಯ ಸಿಕ್ಕಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.