ETV Bharat / state

ಪರೀಕ್ಷಾ ಕೇಂದ್ರದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕೊರೊನಾ ಬಂದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಹಾಸನದ SSLC ವಿದ್ಯಾರ್ಥಿಯೊಬ್ಬನಿಗೆ ಡೆಂಘೀ ಚಿಕಿತ್ಸೆ ವೇಳೆ ಆತನ ಗಂಟಲು ದ್ರವವನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು. ಆ ವಿದ್ಯಾರ್ಥಿ ಪರೀಕ್ಷೆ ಬರೆಯುವ ವೇಳೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಬಳಿಕ ಆತನೊಂದಿಗೆ ಪರೀಕ್ಷೆ ಬರೆದಿದ್ದ 19 ವಿದ್ಯಾರ್ಥಿಗಳ ಗಂಟಲ ದ್ರವವನ್ನ ಪರೀಕ್ಷೆಗೊಳಪಡಿಸಲಾಗಿದೆ. ಅದು ಸಹ ನೆಗೆಟಿವ್ ಎಂದು ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷಾ ಕೇಂದ್ರದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕೊರೊನಾ ಬಂದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ
author img

By

Published : Jun 28, 2020, 6:24 PM IST

ಚಾಮರಾಜನಗರ: ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕಂಡು ಬಂದಿರುವ ಕೊರೊನಾ ಸೋಂಕು ಪರೀಕ್ಷಾ ಕೇಂದ್ರದಿಂದ ಬಂದಿರುವ ಸೋಂಕಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬನಿಗೆ ಡೆಂಘೀ ಚಿಕಿತ್ಸೆ ವೇಳೆ ಆತನ ಗಂಟಲು ದ್ರವವನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು. ಆ ವಿದ್ಯಾರ್ಥಿ ಪರೀಕ್ಷೆ ಬರೆಯುವ ವೇಳೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಬಳಿಕ ಆತನೊಂದಿಗೆ ಪರೀಕ್ಷೆ ಬರೆದಿದ್ದ 19 ವಿದ್ಯಾರ್ಥಿಗಳ ಗಂಟಲ ದ್ರವವನ್ನ ಪರೀಕ್ಷೆಗೊಳಪಡಿಸಲಾಗಿದೆ. ಅದು ಸಹ ನೆಗೆಟಿವ್ ಎಂದು ಬಂದಿದೆ. ಇದರಿಂದ ಯಾರು ಸಹ ಆತಂಕಪಡುವ ಅಗತ್ಯವಿಲ್ಲ ಎಂದರು.

ತಜ್ಞರ ಸಲಹೆಯಂತೆ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮವನ್ನು ಕೈಗೊಳ್ಳಲಾಗಿದೆ. ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಯಾವುದೇ ಮಕ್ಕಳ ಮೇಲೂ ಏನು ಸಮಸ್ಯೆಯಾಗದ ರೀತಿಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನ ಕೈಗೊಂಡು ಈಗಾಗಲೇ ಎರಡು ದಿನ ಪರೀಕ್ಷೆಗಳನ್ನ ಮುಗಿಸಿದ್ದೇವೆ. ಇನ್ನು, ಉಳಿದ ದಿನಗಳು ಕೂಡ ಎಲ್ಲ ಪರೀಕ್ಷೆಗಳನ್ನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಡೆಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.