ಕೊಳ್ಳೇಗಾಲ: ಅಕ್ರಮವಾಗಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಸೇರಿ ಎಂಟು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ನಗರಸಭೆ ಸದಸ್ಯರಾದ ರಾಮಕೃಷ್ಣ, ಮಂಜುನಾಥ್, ಮಾಜಿ ಅಧ್ಯಕ್ಷ ರಮೇಶ್, ಕುಮಾರ್, ರಮೇಶ್, ಸುಂದರ್, ಪ್ರಭುಸ್ವಾಮಿ ಹಾಗು ಕುಮಾರ್ ಬಂಧಿತ ಆರೋಪಿಗಳು.
ಬಂಧಿತರಿಂದ ಪೊಲೀಸರು 21,800 ರೂ. ನಗದು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಜೂಜಾಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ಟೌನ್ ಪಿಎಸ್ಐ ಚೇತನ್ ದಾಳಿ ನಡೆಸಿ ಪಣಕ್ಕಿಟ್ಟಿದ್ದ ಹಣದ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೈ, ಕಾಲು ಕಳೆದುಕೊಂಡ ಯುವಕ