ಚಾಮರಾಜನಗರ : ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಶಾಕ್ಗೆ ಬಲಿಯಾಗಿರುವ ಘಟನೆ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೌಡಹಳ್ಳಿ ಗ್ರಾಮದ ಮಹಾದೇವಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಆನೆ ಮೃತಪಟ್ಟಿದೆ. ಮಹಾದೇವಪ್ಪ 3 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದಾರೆ. ಬೆಳೆ ರಕ್ಷಣೆಗಾಗಿ ಸೋಲಾರ್ ಬೇಲಿ ಅಳವಡಿಸಿದ್ದಾರೆ.
ಪಕ್ಕದಲ್ಲೇ ಹಾದು ಹೋಗಿದ್ದ ಚೆಸ್ಕಾಂ ವೈರ್ ತುಂಡಾಗಿ ಸೋಲಾರ್ ತಂತಿ ಮೇಲೆ ಬಿದ್ದಿದ್ದು ಆಹಾರ ಅರಸಿ ಬಂದಿದ್ದ ಕಾಡಾನೆ ಸೋಲಾರ್ ಬೇಲಿ ಮುಟ್ಟಿದ್ದೇ ತಡ ವಿದ್ಯುತ್ ಶಾಕ್ನಿಂದಾಗಿ ಪ್ರಾಣ ಬಿಟ್ಟಿದೆ.
ಆನೆ ಸಾವಿಗೆ ಕೆಇಬಿ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ. ರೈತ ಮಹಾದೇವಪ್ಪ ವಿರುದ್ಧ ಎಫ್ಐಆರ್ ಏನಾದರೂ ದಾಖಲಿಸಿದರೇ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ಬಿಳಿಗಿರಿ ರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚೆಸ್ಕಾಂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ