ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಬರುವ ಪಡಸಲನತ್ತ ಗ್ರಾಮದ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮುಂದಾದ ರೈತ 30 ಅಡಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ.
ಓದಿ: ನಿರ್ಭಯಾ ಸೇಫ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದೆ; ಐಪಿಎಸ್ ನಿಂಬಾಳ್ಕರ್ ಸ್ಪಷ್ಟನೆ
ಗ್ರಾಮದ ಹಲಗತಂಬಡಿ (60) ಮೃತಪಟ್ಟ ರೈತ. ಭೀಮನಕಲ್ಲು ಗಸ್ತಿನ ಅಡ್ಡಕಲ್ಲು ಅರಣ್ಯ ಪ್ರದೇಶದಲ್ಲಿ ಹುಲ್ಲು ತರಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಹೀಗಾಗಿ ಆಕ್ರೋಶಗೊಂಡಿರುವ ಗ್ರಾಮಸ್ಥರು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ವಿಷಯ ತಿಳಿದ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಸತತ ಪ್ರಯತ್ನ ನಡೆಸಿದ್ದಾರೆ.