ETV Bharat / state

ಮತದಾನ ಮಾಡಿ ವಾಪಸಾಗುತ್ತಿದ್ದ ವೇಳೆ ಕಾಡಾನೆ ದಾಳಿ: ವ್ಯಕ್ತಿ ಸಾವು - kannada top news

ಮತದಾನ ಮಾಡಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ತೋಕೆರೆ ಗ್ರಾಮದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

elephants-attack-death-in-chamarajnagar
ಮತದಾನ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಕಾಡಾನೆ ದಾಳಿ: ವ್ಯಕ್ತಿ ಸಾವು
author img

By

Published : May 10, 2023, 6:37 PM IST

ಚಾಮರಾಜನಗರ: ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮದ ಮತಗಟ್ಟೆಗೆ ತೆರಳಿ ಮತದಾನ ಮಾಡಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಗದಿಗೇರಿ ದೇವಸ್ಥಾನದ ಸಮೀಪ ಮಾರ್ಟಳ್ಳಿ ಗ್ರಾಮದಲ್ಲಿ ವಾಸವಿರುವ ತೋಕೆರೆ ಗ್ರಾಮದ ಪುಟ್ಟಸ್ವಾಮಿ (42) ಎಂಬ ವ್ಯಕ್ತಿಯ ಮೇಲೆ ಕಾಡಾನೆ ತುಳಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಲೂಕಿನ ಹಳೆ ಮಾಟಳ್ಳಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮಕ್ಕೆ ಗಂಡ ಹೆಂಡತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಪುಟ್ಟಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಡಂಚಿನ ಗ್ರಾಮಗಳ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ದ್ವಿಚಕ್ರವಾಹನ ಹಾಗೂ ಇನ್ನಿತರ ವಾಹನಗಳಲ್ಲಿ ತೆರಳಲು ಸಾಧ್ಯವಾಗದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿದೆ. ಇನ್ನು ಮುಂದಾದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿದೆ.

ಮತಘಟ್ಟೆಯ ಮುಂದೆ ವಾಮಚಾರ: ಹನೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಗೇಟಿನ ಮುಂಭಾಗ ವಾಮಾಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 103, 104, 105 ಮೂರು ಬೂತ್​​ಗಳಿದ್ದು ಗೇಟಿನ ಮುಂಭಾಗ ಕಿಡಿಗೇಡಿಗಳು ಎರಡು ಕುಡಿಕೆ ಹಾಗೂ ನಿಂಬೆಹಣ್ಣನ್ನು ಹೂತು ಹಾಕಿ, ಕಲ್ಲನ್ನು ಮುಚ್ಚಿ ಹಾಕಿದ್ದಾರೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ವಾಹನ ಶಾಲೆಯೊಳಗೆ ತೆರಳಿದಾಗ ಕುಡಿಕೆಯ ಮೇಲಿದ್ದ ಕಲ್ಲು ಜರುಗಿದ ಸಂದರ್ಭದಲ್ಲಿ ವಾಮಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಯಾರು ಈ ಕೃತ್ಯ ಮಾಡಿದ್ದಾರೆ ಎಂಬುದು ಮತದಾರರಿಗೆ ಯಕ್ಷ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಮತದಾನಕ್ಕೆ ಬಂದ ಮಹಿಳೆಗೆ ಲಾಠಿ ಏಟು ಆರೋಪ.. ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

ಮತದಾನ ಬಹಿಷ್ಕರಿಸಿದ್ದ ಗ್ರಾಮಕ್ಕೆ ಡಿಸಿ ಭೇಟಿ: ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಆರೋಪ ಮಾಡಿ ಮತದಾನ ಬಹಿಷ್ಕರಿಸಿದ್ದ ಗ್ರಾಮಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಭೇಟಿ ನೀಡಿ ನಂತರ ಮತದಾನ ಮಾಡಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕ ಎಲಚೆಟ್ಟಿ ಗ್ರಾಮ 101 ಅರ್ಹ ಮತದಾರರನ್ನು ಹೊಂದಿದೆ. ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಬಸ್ ಸೌಕರ್ಯ ಇಲ್ಲವೆಂದು ಅಸಮಾಧಾನಗೊಂಡು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಗುಂಡ್ಲುಪೇಟೆ ತಹಶೀಲ್ದಾರ್​​ ಮಾತಿಗೂ ಬಗ್ಗದ ಗ್ರಾಮಸ್ಥರು ಸುಮಾರು 4 ಗಂಟೆಯಾದರು ಮತದಾನ ಮಾಡದೇ ಪಟ್ಟು ಹಿಡಿದು ಕುಳಿತಿದ್ದರು. ಕೊನೆಗೆ ಜಿಲ್ಲಾಧಿಕಾರಿ ಗ್ರಾಮಕ್ಕೆ ತೆರಳಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಮತದಾನ.. ಯುವಕರಿಗೆ ಮಾದರಿಯಾದ ಹಿರಿಯ ನಾಗರಿಕರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.