ಚಾಮರಾಜನಗರ: ಹಳ್ಳವೊಂದರ ಪೈಪ್ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ವಿ.ಸಿ.ಹೊಸೂರು ಗ್ರಾಮದ ಸಮೀಪ ನಡೆದಿದೆ. ಅಕ್ರಮ ಗಣಿಗಾರಿಕೆ ನಡೆಸುವವರು ಇಲ್ಲವೇ ಬೇಟೆಯಾಡುವವರು ಈ ಸ್ಫೋಟಕ ವಸ್ತುಗಳನ್ನು ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 120 ಜಿಲಿಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡು ಭದ್ರವಾಗಿಡಲಾಗಿದೆ.
ತಮಿಳುನಾಡಿನ ತಿರುಚಿ ಜಿಲ್ಲೆಯಲ್ಲಿ ತಯಾರಿಸಿರುವ ಸ್ಫೋಟಕ ಇದಾಗಿದ್ದು, ಅಕ್ರಮವಾಗಿ ಗಣಿಗಾರಿಕೆ ನಡೆಸಲು ಇಲ್ಲವೇ ಅಂತಹವರಿಗೆ ಮಾರಾಟ ಮಾಡಲು ತಂದಿಟ್ಟರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.