ETV Bharat / state

ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಕಚೇರಿಗೆ ಬಾಂಬ್​ ಬೆದರಿಕೆ.. ಪೊಲೀಸರಿಗೆ ಬಂತು ಕರೆ - mysore latest news

ನೇರವಾಗಿ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ.

fake threat call to Department of Commerce and Tax departments Office
ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಕಚೇರಿ
author img

By

Published : Sep 22, 2021, 1:24 PM IST

Updated : Sep 22, 2021, 3:04 PM IST

ಮೈಸೂರು: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಕಚೇರಿಗೆ ಬಾಂಬ್​​ ಇಟ್ಟಿರುವುದಾಗಿ ಹುಸಿ ಬಾಂಬ್ ಬೆದರಿಕೆ ಕರೆ ಪೊಲೀಸರಿಗೆ ಬಂದಿರುವ ಘಟನೆ ನಗರದಲ್ಲಿ ನಡೆದಿದೆ.

ನೇರವಾಗಿ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮಂಜುನಾಥ್​​ ಪ್ರತಿಕ್ರಿಯೆ

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಂಟಿ ಆಯುಕ್ತ ಮಂಜುನಾಥ್, ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ. ಪೊಲೀಸರಿಗೆ ನೇರವಾಗಿ ಬಾಂಬ್ ಇರಿಸಿರುವುದಾಗಿ ಯಾರೋ ತಿಳಿಸಿದ್ದಾರೆ. ಕಾನ್ಸ್‌ಟೇಬಲ್ ಒಬ್ಬರು ಬಂದು ನನಗೆ ಮೆಸೇಜ್ ತೋರಿಸಿದರು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ

ಅದರಲ್ಲಿದ್ದ ವಿಳಾಸ ಹಾಗೂ ಅಕ್ಕಪಕ್ಕದ ಕಚೇರಿಗಳ ಹೆಸರು ನೋಡಿ ಖಾತರಿ ಮಾಡಿಕೊಂಡೆ. ಬೆಳಗ್ಗೆ 11.30ರ ಸುಮಾರಿಗೆ ಬಂದು ತಿಳಿಸಿದರು. ತಕ್ಷಣ ಮೀಟಿಂಗ್ ಬಿಟ್ಟು ನಾವು ಹೊರಗೆ ಬಂದೆವು. ಕಚೇರಿಯಲ್ಲಿ ಸುಮಾರು‌ 80 ಸಿಬ್ಬಂದಿ ಇದ್ದಾರೆ ಎಂದು ಹೇಳಿದರು.

Last Updated : Sep 22, 2021, 3:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.