ಚಾಮರಾಜನಗರ : ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತರು, ರಸ್ತೆತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆ ಕಾರ್ಪೊರೇಟ್ ಕುಳಗಳ ಹಿತ ಕಾಯಲಿದೆ. ರೈತರಿಗೆ ಇದು ಮಾರಕವಾಗಿದೆ ಎಂದು ಕಿಡಿಕಾರಿದರು.
ರಕ್ತಪಾತವಾದರೂ ಸರಿಯೇ ಈ ಕಾಯ್ದೆ ಹಿಂಪಡೆಯುವವರಿಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.