ಕೊಳ್ಳೇಗಾಲ (ಚಾಮರಾಜನಗರ): ಕೃಷಿ ಕಾಯ್ದೆ ತಿದ್ದುಪಡಿ ಮತ್ತು ರೈತ ವಿರೋಧಿ ನಡೆ ವಿರೋಧಿಸಿ ರೈತ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಅಲ್ಲದೆ ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ಬಾರುಕೋಲಿನಿಂದ ಬಾರಿಸಬೇಕಾಗುತ್ತದೆ ಎಂದಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆ ಜಾರಿಗೆ ತಂದು ರೈತರನ್ನು ಸರ್ವನಾಶ ಮಾಡುತ್ತಿವೆ. ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ರೈತರ ಜೀವನವಂತೂ ಸರ್ವನಾಶವಾಗುತ್ತಿದೆ. ದೇಶದಾದ್ಯಂತ ಕಾಯ್ದೆಗಳನ್ನು ಹಿಂಪಡೆಯಿರಿ ಎಂದು ಪ್ರತಿಭಟನೆ ನಡೆಸಿದರೂ ಪ್ರಧಾನಿ ನರೇಂದ್ರ ಮೋದಿ ರೈತರ ಕಷ್ಟವನ್ನು ಕೇಳುತ್ತಿಲ್ಲ. ಆದರೆ ಅದಾನಿ, ಅಂಬಾನಿ ಭೇಟಿ ಮಾಡುತ್ತಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ರೈತರ 'ಟ್ರ್ಯಾಕ್ಟರ್ ಮಾರ್ಚ್' ಪ್ರಾರಂಭ; ನಾಳೆ ಮತ್ತೊಂದು ಸುತ್ತಿನ ಮಾತುಕತೆ