ಚಾಮರಾಜನಗರ: ಅಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ ಚೆಸ್ಕಾಂನ ಚಾಮರಾಜನಗರ ಉಪವಿಭಾಗಕ್ಕೆ ರೈತರು ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭಾಗ್ಯರಾಜ್ ನೇತೃತ್ವದಲ್ಲಿ ಸಂತೇಮರಹಳ್ಳಿ, ನವಿಲೂರು, ಅರಳಿಕಟ್ಟೆ ಹುಂಡಿ, ಜೆನ್ನೂರು, ಹೊಸೂರು ಸೇರಿದಂತೆ ಹಲವಾರು ಗ್ರಾಮಗಳ ರೈತರು ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಕಿಡಿಕಾರಿ, ಅಧಿಕಾರಿಗಳಿಗೆ ಚಳಿ ಬಿಡಿಸಿದ್ರು.
ಗ್ರಾಮೀಣ ಪ್ರದೇಶದಲ್ಲಿ ರೈತರ ಪಂಪ್ಸೆಟ್ ಗಳಿಗೆ ಕನಿಷ್ಠ ಎಂಟು ಗಂಟೆಗಳ ಕಾಲ ತ್ರೀಪೇಸ್ ವಿದ್ಯುತ್ ನೀಡಬೇಕು, ಮನೆಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ನೀಡಿ ರೈತರಿಗೆ ವಂಚಿಸುತ್ತಿರುವುದು ನಿಲ್ಲಬೇಕು, ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ರೈತರು ಒತ್ತಾಯಿಸಿದರು. ಅಲ್ಲದೆ, ರಾಜ್ಯಮಟ್ಟದ ಅಧಿಕಾರಿಗಳು ಸ್ಥಳಕ್ಕಾಗಮಿಸಬೇಕು ಎಂದು ಪಟ್ಟು ಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ರು.
ಕೊನೆಗೂ ಪೊಲೀಸರು ಮತ್ತು ಅಧಿಕಾರಿಗಳು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.