ಚಾಮರಾಜನಗರ: ರಸಗೊಬ್ಬರ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಇಂದು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದ ಎದುರು ಜಮಾಯಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನ ತಲುಪಿ ಅಲ್ಲಿಯೂ ಕೆಲಕಾಲ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಕ್ಷೇತ್ರವೂ ಸಹ ಕೆಲವು ದಿನಗಳಿಂದ ಲಾಭದಾಯಕವಾಗಿಲ್ಲ. ಕೇಂದ್ರ ಸರ್ಕಾರ ರಸಗೊಬ್ಬರಕ್ಕೆ ವೈಜ್ಞಾನಿಕ ದರ ನಿಗದಿ ಮಾಡಿಲ್ಲ. ಶೇ. 40ರಷ್ಟು ರಸಗೊಬ್ಬರ ದರವನ್ನು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರ ಕೂಡಲೇ ದರ ಹೆಚ್ಚಳವನ್ನು ಕೈಬಿಟ್ಟು, ಕಡಿಮೆ ದರದಲ್ಲಿ ರೈತರಿಗೆ ರಸಗೊಬ್ಬರವನ್ನು ವಿತರಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.