ETV Bharat / state

ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ ಅಧಿಕಾರಿಗಳು - ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸೂಚನೆ

ಪಟ್ಟಣದ ಹಲವು ಕಡೆ ಸಂಚರಿಸಿದ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸೂಚನೆ ನೀಡಿದರು. ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು.

fine
fine
author img

By

Published : May 6, 2020, 7:48 AM IST

ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಸಂಚರಿಸುತ್ತಿರುವ ಮತ್ತು ಅಂತರ ಕಾಯ್ದುಕೊಳ್ಳದೆ ಅಂಗಡಿ ಮುಂಗಟ್ಟುಗಳಲ್ಲಿ ನಿಂತಿದ್ದ ಸಾರ್ವಜನಿಕರಿಗೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಫ್ಲೈಯಿಂಗ್​ ಸ್ಕ್ವಾಡ್ ಪ್ರಮೋದ್ ಕುಮಾರ್ ದಂಡ ವಿಧಿಸಿದರು.

ಪಟ್ಟಣದ ಹಲವು ಕಡೆ ಸಂಚರಿಸಿದ ಅಧಿಕಾರಿಗಳು ವಿವಿಧ ಅಂಗಡಿಳಿಗೆ ಭೇಟಿ ನೀಡಿ ಕೊರೊನಾ ಸೋಂಕು ಹರಡದಂತೆ ಅಂಗಡಿ ಮಾಲೀಕರಿಗೆ ತಿಳಿ ಹೇಳಿದರು.

ಈ ವೇಳೆ ಅವರು ಮಾತನಾಡಿ, ಚಾಮರಾಜನಗರ ಜಿಲ್ಲೆ ಕೊರೊನಾ ಮುಕ್ತವಾಗಿದ್ದು, ಇದು ಹೀಗೆಯೇ ಮುಂದುವರಿಯಬೇಕಾದರೆ ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ ಮಾಸ್ಕ್ ಧರಿಸಿ ಒಡಾಡಬೇಕು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಸ್ತುಗಳನ್ನು ಖರೀದಿಸಬೇಕು. ಈ ನಿಯಮಗಳನ್ನು ಮೀರಿದರೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದ ಸುಮಾರು 15 ಮಂದಿಗೆ 200 ರೂ.ನಂತೆ ದಂಡ ವಿಧಿಸಿದರು. ಪುರಸಭೆ ಮುಖ್ಯಾಧಿಕಾರಿ ರಮೇಶ್, ಆರೋಗ್ಯಾಧಿಕಾರಿ ಗೋಪಿ ಸೇರಿದಂತೆ ಇತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.