ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಮಾರು 50 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಹನೂರು ವನ್ಯಜೀವಿ ವಲಯದ ಬಂಡಳ್ಳಿ ಬೀಟ್ನ ಬಾವಿಗುಡ್ಡ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ಕಾಣಿಸಿಕೊಂಡ ಬೆಂಕಿ ರಾತ್ರಿ 2 ಗಂಟೆಯವರೆಗೂ ನಿರಂತರವಾಗಿ ಉರಿದಿದೆ. ವಲಯ ಅರಣ್ಯಾಧಿಕಾರಿ ಸೇರಿದಂತೆ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಕಳೆದ ಮೂರು ದಿನಗಳ ಹಿಂದೆ ಕೊತ್ತನೂರು ವನ್ಯಜೀವಿ ವಲಯದಲ್ಲೂ ಸಾಕಷ್ಟು ಕಡೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಲ್ಲಲ್ಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಇದನ್ನೂ ಓದಿ.. ದೀದಿಗೆ ಸುವೇಂದು ಸವಾಲು... ನಂದಿಗ್ರಾಮದಿಂದಲೇ ಸ್ಪರ್ಧೆ, ಬಿಜೆಪಿ ಮೊದಲ ಪಟ್ಟಿ ಬಿಡುಗಡೆ
ಕಳೆದ 15 ದಿನಗಳಿಂದಲೂ ಕಾವೇರಿ ವನ್ಯಧಾಮದಲ್ಲಿ ಆಗಿಂದಾಗ್ಗೆ ಬೆಂಕಿ ಕಾಣಿಸಿಕೊಳ್ಳುತ್ತಲೇ ಇದೆ. ಈ ಬಾರಿ ಬೆಂಕಿ ಕಾವಲುಗಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಿಕೊಳ್ಳದಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿದು ಬಂದಿದೆ.