ಚಾಮರಾಜನಗರ: ಮಹಾಮಾರಿ ಕೊರೊನಾ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ ಎಂದು ಉನ್ನತ ಮೂಲಗಳು ಈಟಿವಿ ಭಾರತಕ್ಕೆ ತಿಳಿಸಿವೆ.
ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹನೂರು ತಾಲೂಕಿನ ಕಾಮಗೆರೆಯ 60 ವರ್ಷದ ವ್ಯಕ್ತಿಯೊಬ್ಬರು ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಎರಡು ದಿನಗಳ ಹಿಂದೆ ಸಾರಿ (SARI) ಪ್ರಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 9 ರ ವೇಳೆಗೆ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ವರದಿ ಇಂದು ಮಧ್ಯಾಹ್ನ 3 ಗಂಟೆಗೆ ಬಂದಿದೆ ಎಂದು ತಿಳಿದುಬಂದಿದೆ.
ಮೃತರ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತ ನಿಗದಿ ಮಾಡಿರುವ ಸರ್ಕಾರಿ ಜಮೀನಿನಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ. ಪಿಎಫ್ಐ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ.