ಚಾಮರಾಜನಗರ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಹನೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಬಸವರಾಜು (35) ಎಂಬ ಆತ್ಯಾಚಾರಿಯನ್ನು ಬಂಧಿಸಲಾಗಿದೆ. ಮನೆಯ ಎದುರುಗಡೆ ಆಟವಾಡುತ್ತಿದ್ದ ಮಗುವನ್ನು ಇಡ್ಲಿ ಕೊಡಿಸುತ್ತೇನೆಂದು ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮಗು ಅಸ್ವಸ್ಥಗೊಂಡಿದ್ದನ್ನು ಗಮನಿಸಿದಾಗ ವಿಚಾರ ಬೆಳಕಿಗೆ ಬಂದಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿದೆ.
ಸ್ಥಳಕ್ಕೆ ಕೊಳ್ಳೇಗಾಲ ಡಿವೈಎಸ್ಪಿ ನವೀನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಮಾಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.