ಗುಂಡ್ಲುಪೇಟೆ: ಕೋವಿಡ್-19 ಸೋಂಕು ನಿವಾರಣೆಗೆ ತಾಲೂಕಿನ ಗಡಿ ಭಾಗದಲ್ಲಿ ಹಗಲಿರುಳು ದುಡಿಯುತ್ತಿರುವ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್ ನಿತ್ಯ ಒಂದು ಬಾರಿಯ ಊಟದ ವ್ಯವಸ್ಥೆ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 766 ಮತ್ತು 67ರ ಮೂಲೆಹೊಳೆ ಮತ್ತು ಕೆಕ್ಕನಹಳ್ಳ ಚೆಕ್ಪೋಟ್ಟ್ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕಂದಾಯ, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಸೋಂಕು ನಿವಾರಣೆಗೆ ಪಣತೊಟ್ಟ ಸರ್ಕಾರದ ನಿರ್ದೇಶನಗಳಿಗೆ ಕುಟುಂಬವನ್ನು ಬಿಟ್ಟು, ಜನರಿಗಾಗಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಣವ್ ಮನವಿ ಮಾಡಿದ್ದಾರೆ. ಈ ಪ್ರದೇಶದಲ್ಲಿ ಯಾವುದೇ ದಿನಸಿ ಅಂಗಡಿಗಳಿಲ್ಲ. ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಲಾಕ್ಡೌನ್ ಮುಗಿಯುವವರೆಗೂ ಊಟ ವ್ಯವಸ್ಥೆ ಮಾಡುವುದಾಗಿ ಎಂ.ಪ್ರಣಾಯ್ ತಿಳಿಸಿದರು.