ಕೊಳ್ಳೇಗಾಲ(ಚಾಮರಾಜನಗರ): ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ 58ನೇ ಹುಟ್ಟುಹಬ್ಬವನ್ನ ಅವರ ಅಭಿಮಾನಿ ಬಳಗದಿಂದ ವಿಶೇಷವಾಗಿ ಆಚರಿಸಲಾಯಿತು.
ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಮೇಲೆ ಪುಷ್ಪವೃಷ್ಟಿ ಮಾಡಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ನಂಜುಂಡಸ್ವಾಮಿ, ಕೊರೊನಾ ವಿರುದ್ಧ ಎಲ್ಲಾ ರಾಷ್ಟ್ರಗಳು ಹೋರಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್ ಜೀವದ ಹಂಗು ತೊರೆದು ಕಳೆದ 4 ತಿಂಗಳಿನಿಂದ ಕೆಲಸ ಮಾಡುತ್ತಿದ್ದಾರೆ.
ಕೊರೊನಾ ವಾರಿಯರ್ಸ್‌ಗೆ ನನ್ನ ಅಭಿಮಾನಿ ಬಳಗ ಅಭಿನಂದನಾ ಸಮಾರಂಭ ಏರ್ಪಡಿಸಿರುವುದು ನನಗೆ ಸಂತಸ ತಂದಿದೆ ಎಂದರು.