ಚಾಮರಾಜನಗರ : ಕರ್ನಾಟಕದಲ್ಲಷ್ಟೇ ಕಾಂಗ್ರೆಸ್ ಅಲ್ಪಸ್ವಲ್ಪ ಉಸಿರಾಡುತ್ತಿದೆ. ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸಂತೇಮರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯಲ್ಲಿ ಇನ್ನೂ 25 ವರ್ಷ ಕಾಂಗ್ರೆಸ್ ವಿಪಕ್ಷದಲ್ಲಿ ಕೂರಲಿದೆ. ಇಡೀ ವಿಶ್ವವೇ ಮೋದಿ ಅವರನ್ನು ಕೊಂಡಾಡುತ್ತಿದೆ. ಪ್ರಧಾನಿ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ ಮಾತನಾಡಬೇಕೆಂದು ಕೈ ಪಾಳೆಯಕ್ಕೆ ಬಿಎಸ್‌ವೈ ತಿರುಗೇಟು ಕೊಟ್ಟರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಿಲ್ಲವೋ ಅಲ್ಲಿ ಅವರ ಬೆಂಬಲ ಕೇಳಿದ್ದೇವೆ. 15-17 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ 40 ಪರ್ಸೆಂಟ್ ಸರ್ಕಾರ ಎಂದು ಜರಿಯುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿ, ಚುನಾವಣೆಯ ಫಲಿತಾಂಶವೇ ಅವರೆಲ್ಲಾ ಟೀಕೆಗೆ ಉತ್ತರ ಎಂದರು.