ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹೆಚ್.ಮೂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಾದೇವಪ್ಪ ಎಂಬುವರ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಮಹಾದೇವಪ್ಪ, ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ ಮತ್ತು ಶೃತಿ ನೇಣಿಗೆ ಶರಣಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ಕಿರಣ್ ರಾಜ್ ಎಂಬುವರು ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿ, ಸಾವಿಗೆ ಕಾರಣ ತಿಳಿದುಬಂದಿಲ್ಲ. ಹೆಂಚೆತ್ತಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.