ETV Bharat / state

ಸಗಣಿಯಲ್ಲಿ ಹೊಡೆದಾಡಿಕೊಂಡ ಜನರು.. ಇದು ಗಡಿನಾಡ ಕನ್ನಡಿಗರ ವಿಶೇಷ 'ಗೊರೆ ಹಬ್ಬ' - throwing cow dung at each other Gumatapura village

Gorehabba festival Celebration: ಚಾಮರಾಜನಗರದ ಗಡಿ ಭಾಗದಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಬಲಿಪಾಡ್ಯಮಿಯ ಮಾರನೇ ದಿನ ಸಗಣಿಯಾಟ ಆಡುವ ವಿಶೇಷ ಹಬ್ಬ ಆಚರಣೆ ಮಾಡಲಾಯಿತು.

gorehabba-festival-celebration-by-throwing-cow-dung-at-each-other-gumatapura-village
ಸಗಣಿಯಲ್ಲಿ ಹೊಡೆದಾಡಿಕೊಂಡ ಜನರು... ಇದು ಗಡಿನಾಡ ಕನ್ನಡಿಗರ ವಿಶೇಷ 'ಗೊರೆ ಹಬ್ಬ'
author img

By ETV Bharat Karnataka Team

Published : Nov 15, 2023, 8:53 PM IST

Updated : Nov 15, 2023, 11:04 PM IST

ಗೊರೆ ಹಬ್ಬ ಆಚರಣೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗಡಿ ಅಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷತೆ.

Gorehabba festival Celebration
ಗೊರೆ ಹಬ್ಬ

ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮಾರನೇ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗೂ ಟ್ರ್ಯಾಕ್ಟರ್​ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕುತ್ತಾರೆ. ಇದಾದ ನಂತರ ಗ್ರಾಮದ ಹೊಳೆ ದಂಡೆಗೆ ಹೋಗಿ ಇಬ್ಬರು ವ್ಯಕ್ತಿಗಳಿಗೆ ಹುಲ್ಲಿನ ಮೀಸೆ ಗಡ್ಡವನ್ನು ಕಟ್ಟಿ, ಹಣೆಗೆ ನಾಮ ಬಳಿದು, ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಊರ ತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತದೆ.

Gorehabba festival Celebration
ಗೊರೆ ಹಬ್ಬ

ಕತ್ತೆ ಮೇಲೆ ಮೆರವಣಿಗೆ: ಹೀಗೆ ಕತ್ತೆಯ ಮೇಲೆ ಕುಳ್ಳರಿಸಿ ಮೆರವಣಿಗೆ ಮಾಡುವವರನ್ನು ಕೊಂಡಕಾರರು ಎನ್ನಲಾಗುತ್ತದೆ. ಕೊಂಡಕಾರ ಎಂದರೆ ಸುಳ್ಳುಗಾರ, ಚಾಡಿಕೋರ ಎಂದರ್ಥ. ಹಿಂದೆ ಸುಳ್ಳು ಹೇಳುವ ವ್ಯಕ್ತಿ ಗ್ರಾಮದ ಜನರಲ್ಲಿ ದ್ವೇಷ, ಅಸೂಯೆ ಮೂಡಿಸಿ, ಅಶಾಂತಿಗೆ ಕಾರಣವಾಗಿದ್ದ ಎನ್ನಲಾಗಿದೆ. ಅಂತಹ ವ್ಯಕ್ತಿಗಳಿಗೆ ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎಂಬುದರ ಸಂಕೇತವಾಗಿ ಇಬ್ಬರಿಗೆ ಚಾಡಿಕೋರರ ವೇಷ ಹಾಕಿ, ಕತ್ತೆಯ ಮೇಲೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಸಗಣಿ ರಾಶಿ ಬಳಿ ಗ್ರಾಮದ ಜನ ಜಮಾಯಿಸುತ್ತಾರೆ.

Gorehabba festival Celebration
ಗೊರೆ ಹಬ್ಬ

ಬಳಿ ಸಗಣಿಯಾಟ ಶುರುವಾಗುತ್ತದೆ. ಸಗಣಿ ರಾಶಿಯಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೆ ಹೊಡೆದಾಡುತ್ತಾರೆ. ದೊಡ್ಡ ದೊಡ್ಡ ಸಗಣಿ ಮುದ್ದೆಗಳನ್ನು ಮಾಡಿ ಒಬ್ಬರ ಮೇಲೆ ಒಬ್ಬರು ಸಗಣಿ ಮುದ್ದೆಗಳನ್ನು ಎತ್ತಿ ಹಾಕಿ ಖುಷಿಪಡುತ್ತಾರೆ. ಸಗಣಿಯ ದೊಡ್ಡ ದೊಡ್ಡ ಮುದ್ದೆಗಳನ್ನು ಕಟ್ಟುವ ರೀತಿ, ಅದನ್ನು ಪ್ರಯಾಸದಿಂದ ಮೇಲಕ್ಕೆತ್ತಿ ಮತ್ತೊಬ್ಬರ ಮೇಲೆ ಎತ್ತಿ ಹಾಕುವ ದೃಶ್ಯ ನಿಜಕ್ಕೂ ಎಂತಹವರಲ್ಲೂ ನಗೆ ತರಿಸುತ್ತದೆ. ಸುಮಾರು ಎರಡು ಗಂಟೆಗಳ ಕಾಲ ನಡೆಯುವ ಈ ಸಗಣಿಯಾಟವನ್ನು ನೋಡಲು ಸುತ್ತಮುತ್ತಲ ಗ್ರಾಮಸ್ಥರು, ಬೇರೆ ಜಿಲ್ಲೆಯ ಜನರೂ ಜಮಾಯಿಸುತ್ತಾರೆ. ಜನರ ಮುಗಿಲು ಮುಟ್ಟುವ ಕಿರುಚಾಟ, ಘೋಷಣೆಗಳು ಗೊರೆ ಕಟ್ಟುವವರ ಉತ್ಸಾಹವನ್ನು ಇಮ್ಮಡಿಗೊಳಿಸುತ್ತದೆ.

Gorehabba festival Celebration
ಗೊರೆ ಹಬ್ಬ

ಧಾರ್ಮಿಕ ನಂಬಿಕೆ ಸಾರುವ ಹಬ್ಬ: ಹೀಗೆ ಸಗಣಿಯಿಂದ ಹೊಡೆದಾಡಿದರೆ ಚರ್ಮದ ಕಾಯಿಲೆಗಳು ವಾಸಿಯಾಗುತ್ತವೆ ಎಂಬ ನಂಬಿಕೆಯೂ ಇಲ್ಲಿನ ಜನರಲ್ಲಿದೆ. ಬೀರೇಶ್ವರನಿಗೆ ಹರಕೆ ಹೊತ್ತವರು ಕೂಡ ಆಟದಲ್ಲಿ ಪಾಲ್ಗೊಳ್ಳುತ್ತಾರೆ. ಇದರಿಂದ ತಮ್ಮ ಮನದ ಬಯಕೆ ಈಡೇರುತ್ತದೆ ಎಂಬ ನಂಬಿಕೆ ಜನರದ್ದಾಗಿದೆ. ಈ ಹಬ್ಬದ ಆಚರಣೆಗೆ ಒಂದು ಹಿನ್ನೆಲೆಯೂ ಇದೆ. ಹಿಂದೆ ಊರಗೌಡರ ಮನೆಯಲ್ಲಿ ಜೀತಕ್ಕಿದ್ದ ವ್ಯಕ್ತಿ ಮಹಾಶಿವಭಕ್ತನಾಗಿದ್ದನಂತೆ. ಆತನ ಮರಣ ನಂತರ ಆತನ ವಿಭೂತಿ, ರುದ್ರಾಕ್ಷಿ ಹಾಗೂ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತಂತೆ. ಕಾಲಾನಂತರ ಗೊಬ್ಬರಕ್ಕಾಗಿ ತಿಪ್ಪೆ ಅಗೆಯುತ್ತಿದ್ದಾಗ ಆ ಸ್ಥಳದಲ್ಲಿ ಲಿಂಗವೊಂದು ಉದ್ಭವವಾಗಿರುವುದು ಗೋಚರಿಸಿತು ಎಂಬ ನಂಬಿಕೆಯಿದೆ. ನಂತರ ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ, ಅಂದಿನಿಂದ ಪ್ರತಿವರ್ಷ ಇಲ್ಲಿ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

ಸಗಣಿಯಾಟದಲ್ಲಿ ಜಾತಿ ಹಾಗೂ ವಯಸ್ಸಿನ ಭೇದವಿಲ್ಲದೆ ಎಲ್ಲರೂ ಪಾಲ್ಗೊಳ್ಳುತ್ತಾರೆ. ಸಗಣಿಯಾಟಕ್ಕೂ ಮುನ್ನ ದಲಿತ ವ್ಯಕ್ತಿಯೇ ಮೊದಲ ಪೂಜೆ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ. ಹೀಗೆ ಪ್ರತಿ ವರ್ಷ ತಪ್ಪದೆ ಗೊರೆಹಬ್ಬ ಮಾಡುವುದರಿಂದ ಗ್ರಾಮದಲ್ಲಿ ಶಾಂತಿ ನೆಲೆಸುತ್ತದೆ. ಮಳೆ- ಬೆಳೆ ಚೆನ್ನಾಗಿ ಆಗುತ್ತದೆ ಎಂಬ ನಂಬಿಕೆ ಕೂಡ ಇದೆ. ಮೇಲ್ನೋಟಕ್ಕೆ ವಿಚಿತ್ರ ಸಂಪ್ರದಾಯದಂತೆ ಕಂಡುಬರುವ ಈ ಆಚರಣೆಯ ಹಿಂದೆ ಧಾರ್ಮಿಕ ನಂಬಿಕೆ ಇದೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ದೀಪಾವಳಿ ವಿಶೇಷ ಆಚರಣೆ: ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು

Last Updated : Nov 15, 2023, 11:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.