ETV Bharat / state

ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ ಸರ್ಕಾರಿ ನೌಕರ - ಆತ್ಮಹತ್ಯೆಗೆ ಯತ್ನಿಸಿದ ಸರ್ಕಾರಿ ನೌಕರ

ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ನೌಕರನಾಗಿ ಹಾಗೂ ಚುನಾವಣಾ ಶಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲಸದ ಒತ್ತಡವನ್ನು ತಾಳಲಾದರೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Government employee who tried to commit suicide
ಆತ್ಮಹತ್ಯೆಗೆ ಯತ್ನಿಸಿದ ಸರ್ಕಾರಿ ನೌಕರ
author img

By

Published : Jan 6, 2021, 8:16 PM IST

ಕೊಳ್ಳೇಗಾಲ (ಚಾಮರಾಜನಗರ): ತಾಲೂಕು ಕಚೇರಿಯಲ್ಲಿ‌ ಪ್ರಥಮ ದರ್ಜೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಕೆಲಸದ‌ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣ ವ್ಯಾಪ್ತಿಯಲ್ಲಿ ಜರುಗಿದೆ.

ತಾಲೂಕಿನ ಪಾಳ್ಯ ಗ್ರಾಮದ ಲೋಕೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ನೌಕರನಾಗಿ ಹಾಗೂ ಚುನಾವಣಾ ಶಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲಿನ ಕೆಲಸ ಒತ್ತಡವನ್ನು ತಾಳಲಾದರೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಕೆಲಸ ಬದಲಾವಣೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದರೂ ಕೂಡ ಬದಲಾವಣೆ ಮಾಡದಿದ್ದರಿಂದ ಮನನೊಂದು ಮನೆಯಲ್ಲಿದ್ದ ಬಿ.ಪಿ ಮಾತ್ರೆಗಳನ್ನು ಸೇವಿಸಿದ್ದಾನೆ.

ಬಳಿಕ ಈತನನ್ನು ತಕ್ಷಣ ಪಟ್ಟಣದ ಜನನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಹೊಸಪೇಟೆ:ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.