ಕೊಳ್ಳೇಗಾಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಳಂದೂರಿನ ಸೈಯದ್ ಅಹಮದ್ (42) ಈದಾಯತ್ ಪಾಷ (28) ಬಂಧಿತ ಆರೋಪಿಗಳು.
ಸರ್ಕಾರ ವಿತರಣೆ ಮಾಡುವ ಪಡಿತರ ಅಕ್ಕಿಯನ್ನು ಬಡಜನರಿಂದ ಹೆಚ್ಚಿನ ಬೆಲೆಗೆ ಖರೀದಿ ಮಾಡಿ ಟಿ.ನರಸೀಪುರದ
ಕಡೆಗೆ ಕುಂತೂರಿನ ಬಳಿ ಟಾಟಾಮ್ಯಾಜೀಕ್ ಪ್ಯಾಸೆಂಜರ್ ಆಟೋದಲ್ಲಿ ಅಕ್ರಮವಾಗಿ ಸಾಗಾಣೆ ಮಾಡುಲಾಗುತ್ತಿದೆ. ಎಂಬ ಖಚಿತ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ವಿ.ಅಶೋಕ್ ತಂಡ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ1,822 ಕೆ.ಜಿ ಅಕ್ಕಿ,ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.