ETV Bharat / state

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಅತಿಥಿ ಶಿಕ್ಷಕನ ಬಂಧನ - ಒಣ ಗಾಂಜಾ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅತಿಥಿ ಶಿಕ್ಷಕನನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Kollegala Rural Station
ಕೊಳ್ಳೇಗಾಲ ಗ್ರಾಮಾಂತರ ಠಾಣೆ
author img

By ETV Bharat Karnataka Team

Published : Dec 8, 2023, 1:00 PM IST

ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 4ನೇ ತಾರೀಖಿನಂದು ವಿದ್ಯುಚ್ಛಕ್ತಿ ಬಿಲ್ ವಸೂಲಾತಿಗೆ ಸಿಬ್ಬಂದಿ ತೆರಳಿದ್ದ ವೇಳೆ ಶಾಲಾ ಕೊಠಡಿಯೊಂದರಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿರುವುದನ್ನು ನೋಡಿದ್ದಾರೆ. ಬಳಿಕ, ಈ ವಿಚಾರವನ್ನು ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರ ಗಮನಕ್ಕೆ ತಂದಿದ್ದು, ಈ ಬಗ್ಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ : ಮತ್ತೊಂದು ಪ್ರಕರಣದಲ್ಲಿ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ಅಕ್ರಮವಾಗಿ ಬೈಕ್​ನಲ್ಲಿ ಒಣ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ನಗರದ ಆಶ್ರಯ ಬಡಾವಣೆ ನಿವಾಸಿ ವಾಹೀದ್ ಪಾಷಾ ಬಂಧಿತ ಆರೋಪಿ. ಈತನಿಂದ ಸುಮಾರು 5 ಕೆ.ಜಿ 480 ಗ್ರಾಂ ತೂಕದ 4 ಲಕ್ಷ ರೂ. ಬೆಲೆ ಬಾಳುವ ಗಾಂಜಾ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

ವಾಹೀದ್ ಪಾಷಾ ಬೈಕ್​ನಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡಲು ಮಳವಳ್ಳಿ ಕಡೆಯಿಂದ ಕೊಳ್ಳೇಗಾಲಕ್ಕೆ ತೆಗೆದುಕೊಂಡು ಬರುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಗಣೇಶ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯನ್ನು ಸಾಮಗ್ರಿ ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ : ಗಾಂಜಾದಿಂದ ಔಷಧ ತಯಾರಿಕೆಗೆ ಅನುಮತಿ ನೀಡಿದ ಜಪಾನ್ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.