ETV Bharat / state

ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ ಬಿಜೆಪಿ ತೆಕ್ಕೆಗೆ

author img

By

Published : Nov 5, 2020, 5:42 PM IST

ನಮ್ಮ ಜಿಲ್ಲೆಯ ನಗರಸಭೆಗಳು ಬಿಜೆಪಿ ತೆಕ್ಕೆಗೆ ಬಂದಿವೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡಿ ಕೆಲಸ ಮಾಡಲಾಗುವುದು ಎಂದು ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

Gundlupet Municipality
ಗುಂಡ್ಲುಪೇಟೆ : ಪಟ್ಟಣದ ಪುರಸಭೆಗೆ ನಡೆದ ಚುನಾವಣೆ

ಗುಂಡ್ಲುಪೇಟೆ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಿ.ಗಿರೀಶ್ ಹಾಗೂ ಉಪಾಧ್ಯಕ್ಷರಾಗಿ ದೀಪಿಕಾ ಅಶ್ವೀನ್ ಅವಿರೋಧವಾಗಿ ಆಯ್ಕೆಯಾದರು.

ಬಿಜೆಪಿ ಪಕ್ಷದಿಂದ ಗೆದ್ದಿದ್ದ 13 ಸದಸ್ಯರ ಪೈಕಿ ಯಾರು ಸಹ ನಾಮಪತ್ರ ಸಲ್ಲಿಸಿದ ಕಾರಣ ಇವರನ್ನು ಅವಿರೋಧವಾಗಿ ಚುನಾವಣಾಧಿಕಾರಿ ನಂಜುಂಡಯ್ಯ ಘೋಷಣೆ ಮಾಡಿದರು.

ಕಾಂಗ್ರೆಸ್ ಪಕ್ಷದ ಎಂಟು ಮಂದಿ ಸದಸ್ಯರು ಗೈರಾಗಿದ್ದರು. ಪಕ್ಷೇತರ ಅಭ್ಯರ್ಥಿ ಶಶಿಧರ್ ದೀಪು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಮೂಲಕ ಬಿಜೆಪಿ ಬೆಂಬಲಿಸಿದರು. ಶಾಸಕ ಸಿ.ಎಸ್.ನಿರಂಜನ ಕುಮಾರ್ ಮತ್ತು ಮತ್ತು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನಮ್ಮ ಜಿಲ್ಲೆಯ ನಗರಸಭೆಗಳು ಬಿಜೆಪಿ ತೆಕ್ಕೆಗೆ ಬಂದಿವೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡಿ ಕೆಲಸ ಮಾಡಲಾಗುವುದು ಎಂದರು.

ಶಾಸಕ ಸಿ.ಎಸ್.ನಿರಂಜನ ಕುಮಾರ್ ಮಾತನಾಡಿ, ಶಾಸಕನಾದ ನಂತರ ನನ್ನ ಕ್ಷೇತ್ರದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯಲು ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್​ಗಳಲ್ಲಿ ಸ್ಥಾನ ಪಡೆದು ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.