ಚಾಮರಾಜನಗರ: ಲಾಡ್ಜ್ವೊಂದರಲ್ಲಿ ಹಾಸನ ಮೂಲದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಆತನ ಬಳಿಯಿದ್ದ ಆಧಾರ್ ಕಾರ್ಡ್ ಮೂಲಕ ಹಾಸನ ಜಿಲ್ಲೆಯ ಬರಾಳು ಬಳಿಯ ಜಾತೇನಹಳ್ಳಿ ಗ್ರಾಮದ ಸಂಜಯ್ (37) ನೇಣಿಗೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಲಾಡ್ಜ್ನಲ್ಲಿ ವಾಸ್ತವ್ಯ ಹೂಡಿದ್ದ ಸಂಜಯ್ ಇಂದು ಬೆಳಗ್ಗೆ ಬಾಗಿಲು ತೆರೆಯದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣವಾಗಲಿ, ಡೆತ್ ನೋಟ್ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.