ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಪೊಲೀಸ್ ಇಲಾಖೆ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಕಿಡಿಕಾರಿದರು.
ಪೊಲೀಸ್ ಇಲಾಖೆ ಮತ್ತು ಸೈನಿಕರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಅವರ ನೈತಿಕತೆ ಕುಂದಿಸುವ ಕಾರ್ಯವನ್ನು ಯಾರೂ ಮಾಡಬಾರದು. ಹೆಚ್ಡಿಕೆ ಮಾತು ಕೇಳುತ್ತಿದ್ದರೆ ತಾನು ಕಳ್ಳ, ಪರರನ್ನು ನಂಬ ಎಂಬಾಂತಾಗಿದೆ. ಅವರ ಅವಧಿಯಲ್ಲಿ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿರುವ ಗುಮಾನಿ ಮೂಡುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರ ಮನಸ್ಸಲ್ಲಿ ಗೊಂದಲವಿದ್ದಲ್ಲಿ ಸದನದಲ್ಲಿ ಮಂಡಿಸಲಿ. ಇದರ ಮೇಲೆ ನಂಬಿಕೆ ಇಲ್ಲದಿದ್ದಲ್ಲಿ ನ್ಯಾಯಾಂಗದ ಮುಂದೆ ಹೋಗಲಿ ಎಂದು ಹೆಚ್ಡಿಕೆ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು.
ಹೆಚ್.ವಿಶ್ವನಾಥ್ ಸಂಪುಟಕ್ಕೆ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ, ನನಗೂ ಅವರು ಮಂತ್ರಿಯಾಗಬೇಕೆಂಬ ಅಪೇಕ್ಷೆ ಇದೆ. ಬಿಎಸ್ವೈ ಅವರ ವಿವೇಚನೆಯಂತೆ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ನೂರಾರು ಕಾರ್ಯಕರ್ತರು ರ್ಯಾಲಿ ನಡೆಸಿ ಜನಜಾಗೃತಿ ಮೂಡಿಸಿದರು.